ಮೈಸೂರು: ಎರಡನೇ ತರಗತಿಯ ಶಾಲಾ ಬಾಲಕಿಯನ್ನು ಅಪರಿಚಿತ ವ್ಯಕ್ತಿಗಳು ಅಪಹರಣಕ್ಕೆ ಯತ್ನಿಸಿದ ಪ್ರಕರಣ ನಂಜನಗೂಡಿನ (Nanjangud) ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಲಕಿ ಶಾಲೆಯ (School) ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತರು ವಿದ್ಯಾರ್ಥಿನಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಕೂಡಲೇ ಬಾಲಕಿ ಕಿರುಚಿಕೊಂಡಿದ್ದಾಳೆ. ಬಳಿಕ ಅಪರಿಚಿತರು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ
ಅಪಹರಣಕ್ಕೆ ಯತ್ನಿಸಿದವರ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯಾವ ಕಾರಣಕ್ಕೆ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿಲ್ಲ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಶಾಕ್ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]