ರಾಯಚೂರು: ಜಿಲ್ಲೆಯಲ್ಲಿನ ಗರ್ಭಿಣಿ ತಾಯಿ ಹಾಗು ಶಿಶು ಮರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಗೆ ಗೈರಾದ ಇಬ್ಬರು ತಾಲೂಕು ವೈದ್ಯಾಧಿಕಾರಿಗಳು ಅಮಾನತ್ತಾಗಿದ್ದಾರೆ.
Advertisement
ದೇವದುರ್ಗ ತಾಲೂಕು ವೈದ್ಯಾಧಿಕಾರಿ ಡಾ.ಬನದೇಶ್, ಸಿಂಧನೂರು ತಾಲೂಕು ವೈದ್ಯಾಧಿಕಾರಿ ಅಯ್ಯನಗೌಡ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣಗೆ ಅಮಾನತ್ತು ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಗೆ ಸಿಂಧನೂರು ಹಾಗೂ ದೇವದುರ್ಗ ಟಿಎಚ್‍ಓಗಳು ಗೈರು ಹಾಜರಾಗಿದ್ದರು. ಇದನ್ನೂ ಓದಿ: ತನ್ನ ಕಥೆಯನ್ನು ಪಠ್ಯದಿಂದ ಕೈ ಬಿಡಿ: ದೇವನೂರು ಮಹಾದೇವ
Advertisement
Advertisement
ತಾಯಿ ಶಿಶು ಮರಣ ಆಡಿಟ್ ಕಮಿಟಿಯಲ್ಲಿ ಕಳೆದ ಒಂದು ವರ್ಷದ ಮರಣಗಳ ಬಗ್ಗೆ ಆಡಿಟ್ ಮಾಡಬೇಕಿತ್ತು. ಆದರೆ ಅಧಿಕಾರಿಗಳ ಗೈರು ಹಾಜರಿಯಿಂದ ಕೈಗೆತ್ತಿಕೊಂಡ 16 ಪ್ರಕರಣಗಳಲ್ಲಿ ಕೇವಲ 5 ಪ್ರಕರಣಗಳ ಬಗ್ಗೆ ಮಾತ್ರ ಚರ್ಚೆ ಮಾಡಲಾಯಿತು. ಮೆಟರನಿಟಿ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಪ್ರಮುಖ ಸಭೆಗೆ ಗೈರಾಗಿದ್ದಕ್ಕೆ ಜಿಲ್ಲಾಧಿಕಾರಿಗಳು ಗರಂ ಆಗಿದ್ದು, ಅಮಾನತ್ತು ಆದೇಶ ಹೊರಡಿಸಿದ್ದಾರೆ.
Advertisement
ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಪರಿಶೀಲನಾ ವರದಿ ನೀಡುವಂತೆ ಲಿಂಗಸುಗೂರು ಹಾಗೂ ರಾಯಚೂರು ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಮುಂದೆಯೂ ಪ್ರಮುಖ ಸಭೆಗಳಿಗೆ ಗೈರಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ