ಮಡಿಕೇರಿ: ಅಸ್ಸಾಂ ಕಾರ್ಮಿಕರಿಬ್ಬರು ಅಕ್ರಮವಾಗಿ ಗೋಮಾಂಸ ಸಾಗಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಭಜರಂಗದಳ ಕಾರ್ಯಕರ್ತರಿಂದ ಕಾರ್ಯಚರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
Advertisement
ಅಸ್ಸಾಂ ಕಾರ್ಮಿಕರು ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಮಾಲಂಬಿಯ ಭಜರಂಗದಳ ಕಾರ್ಯಕರ್ತರು ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾರ್ಯಚರಣೆ ನಡೆಸುವ ಸಂದರ್ಭದಲ್ಲಿ ಹಾಸನ ಜಿಲ್ಲೆ ಅರಕಲಗೂಡಿನ ಹಂಡ್ರಂಗಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಪೊಲೀಸ್ ಧ್ವಜ ದಿನಾಚರಣೆ – ಶ್ರೇಷ್ಠ ರಾಷ್ಟ್ರನಿರ್ಮಾಣದ ಗುರಿ ನಮ್ಮೇಲ್ಲರ ಧ್ಯೇಯ: ಮಹಮ್ಮದ್ ರೋಷನ್
Advertisement
Advertisement
ಮಾಲಂಬಿ ಕಣಿವೆ ಬಸವನಹಳ್ಳಿ ಕಾಫಿ ತೋಟದ ಲೈನ್ ಮನೆಯಲ್ಲಿರುವ ಅಸ್ಸಾಂ ಕಾರ್ಮಿಕರು. ತಮ್ಮ ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ರು ಎಂದು ಹೇಳಲಾಗಿದೆ. ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
Advertisement
ಶನಿವಾರಸಂತೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.