ಸ್ಯಾಂಡಲ್‌ವುಡ್ ಕ್ವೀನ್ಗೆ ರಮ್ಯಾ (Actress Ramya) ಅಶ್ಲೀಲ ಮೆಸೇಜ್ ಹಾಕಿದ್ದವರ ಪೈಕಿ ಸದ್ಯ ಸಿಸಿಬಿ ಪೊಲೀಸರು (CCB Police) ಮತ್ತಿಬ್ಬರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೆ ಏರಿದೆ.
ಸಿಸಿಬಿ ಪೊಲೀಸರು ರಾಜೇಶ್ ಹಾಗೂ ಭುವನ್ ಗೌಡ ಎಂಬುವವರನ್ನು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಓಬಣ್ಣ ಮತ್ತು ಗಂಗಾಧರ್‌ನ್ನು ಬಂಧಿಸಿದ್ದರು.ಇದನ್ನೂ ಓದಿ: ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು.
ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು, ಮೈಸೂರು, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚಿಗೆ ಬಂಧಿಸಿದ್ದ ಇಬ್ಬರ ಪೈಕಿ ಓರ್ವ ದರ್ಶನ್ ಅಭಿಮಾನಿ ಹಾಗೂ ಇನೋರ್ವ ಧನ್ವೀರ್ ಅಭಿಮಾನಿ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ