ಬೆಂಗಳೂರು: ಮಂಡ್ಯದಲ್ಲಿ (Mandya) ಮುಸ್ಲಿಂ ಮಹಿಳೆಯರ (Muslim Women) ವಿರುದ್ಧ ಆರ್‌ಎಸ್‌ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prbhakar Bhat) ಅವರ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಅವರ ವಿರುದ್ಧ ಮತ್ತೆರಡು ದೂರು ದಾಖಲಾಗಿದೆ.
ರಹೀಬ್ ವುಲ್ಲಾ ಹಾಗೂ ಉಸ್ಮಾನ್ ಎಂಬವರು ದೂರು ನೀಡಿದ್ದು, ಬೆಂಗಳೂರಿನ (Bengaluru) ಡಿಜೆ ಹಳ್ಳಿ (DJ Halli) ಮತ್ತು ಶೇಷಾದ್ರಿಪುರಂ (Sheshadripuram) ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡು ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಲಾಗಿದ್ದು, ಎರಡೂ ಠಾಣೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ. ಹನುಮ ಜಯಂತಿ ವೇಳೆ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ಪ್ರಭಾಕರ್ ಭಟ್ ನೀಡಿದ್ದರು. ಈ ಹಿನ್ನೆಲೆ ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್ ಮುತಾಲಿಕ್
ಪ್ರಕರಣ ಏನು?
ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಮರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು. ಇದನ್ನೂ ಓದಿ: ಹಿಂದಿನ ಚುನಾವಣೆಯಲ್ಲಿ ಪುಲ್ವಾಮಾ, ಈಗ ರಾಮನ ಫೋಟೋ ಹಿಡಿದಿದ್ದಾರೆ- ಕೇಂದ್ರದ ವಿರುದ್ಧ ಸುಧಾಕರ್ ಕಿಡಿ
ಪ್ರಭಾಕರ ಭಟ್ ಹೇಳಿದ್ದೇನು?
ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣುಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ. ಇದನ್ನೂ ಓದಿ: ಅನ್ಯಭಾಷೆ ಸಿನಿಮಾ ಪ್ರದರ್ಶನ ಬಂದ್ ಮಾಡ್ತೀವಿ : ವಾಟಾಳ್ ನಾಗರಾಜ್
ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ ಧರಿಸುತ್ತೇವೆ. ನಾವು ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗ್ತೀವಿ. ನೀವು ತಾಕತ್ತಿದ್ದರೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದರು. ಇದನ್ನೂ ಓದಿ: ಪಾಂಡವಪುರ ಪುರಸಭೆ ಉಪಚುನಾವಣೆಯಲ್ಲಿ ಜೆಡಿಎಸ್‍ಗೆ ಜಯ