Districts
ಡಿವೈಡರ್‍ಗೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ- ಇಬ್ಬರ ಸಜೀವ ದಹನ

ವಿಜಯಪುರ: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಡಿವೈಡರ್ ಗೆ ಲಾರಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಚಾಲಕ ಮತ್ತು ಕ್ಲೀನರ್ ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ.
ಕಬ್ಬಿಣ ತುಂಬಿದ ಲಾರಿ ಮಹಾರಾಷ್ಟ್ರದಿಂದ ವಿಜಯಪುರ ಮಾರ್ಗವಾಗಿ ತೆರಳುವಾಗ ವಿಜಯಪುರದ ಹಿಟ್ನಳ್ಳಿ ಗ್ರಾಮದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 50 ರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಡಿವೈಡರ್‍ಗೆ ಗುದ್ದಿದ ರಭಸಕ್ಕೆ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಇಬ್ಬರು ಸಜೀವ ದಹನವಾಗಿದ್ದಾರೆ. ಆದ್ರೆ ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಗ್ರಾಮೀಣ ಪೊಲಿಸರು ಪ್ರಕರಣ ದಾಖಲಿಸಿಕೊಂಡು ಲಾರಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ.
https://www.youtube.com/watch?v=K-blT7Qhn5E&feature=youtu.be
