ಯಾದಗಿರಿ: ಸ್ಥಳೀಯ ಸಂಸ್ಥೆ ಚುನಾವಣೆಯ ಮತದಾನ ಆರಂಭಕ್ಕೂ ಮುಂಚೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ಪಟ್ಟಣದ ರಂಗಂಪೇಟೆ ಬಳಿ ನಡೆದಿದೆ.
ಪ್ರಚಾರಕ್ಕೆ ತೆರಳಿದ ವೇಳೆ ಕೈ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿ ನಂತರ ಕಲ್ಲು ತೂರಾಟ ನಡೆಸಿದ್ದಾರೆ. ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಯಡಾ ಮಾರ್ಟಿನ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇತ್ತ ಸುರಪುರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇದನ್ನೂ ಓದಿ: ಪಕ್ಷಗಳಿಗೆ ಲೋಕಲ್ ಎಲೆಕ್ಷನ್ ಟೆಸ್ಟ್ – ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ
Advertisement
Advertisement
ಗಲಾಟೆ ಸಂಬಂಧ ಶಾಸಕ ರಾಜುಗೌಡ ಪ್ರತಿಕ್ರಿಯಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುರಪುರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿಯೇ ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮತದಾರರ ಮೇಲೆ ಕೈ ಕಾರ್ಯಕರ್ತರು ದೌರ್ಜನ್ಯ ಮಾಡುತ್ತಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement