Bengaluru CityCrimeDistrictsKarnatakaLatestLeading NewsMain Post
ಕಸದ ಲಾರಿಗೆ ಇಬ್ಬರು ಬಲಿ- ಬಿಬಿಎಂಪಿಯಿಂದ ತಲಾ 25 ಲಕ್ಷ ಪರಿಹಾರ
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ (Lorry Accident) ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.
ತ್ಯಾಜ್ಯ ಸುರಿಯಲು ಹೋಗ್ತಿದ್ದ ವೇಳೆ ಬೈಕ್‍ಗೆ ಬಿಬಿಎಂಪಿ (BBMP) ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಪರಾರಿ ಆಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ರು. ನಂತರ ಕಸದ ಲಾರಿಗಳ ವಿರುದ್ಧ ಸ್ಥಳೀಯ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿ, ರಸ್ತೆಯಲ್ಲಿ ಇರುವ ಮೃತದೇಹಗಳನ್ನು ಎತ್ತಲು ಬಿಡದೆ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಬಂದ ಬಿಬಿಎಂಪಿ ಸೂಪರಿಂಡೆಂಟ್ ಇಂಜಿನಿಯರ್ ಪ್ರವೀಣ್ ಸೂದ್, ಮೃತರಿಗೆ ತಲಾ 25 ಲಕ್ಷ ಪರಿಹಾರ ವಿತರಿಸುವುದಾಗಿ ಹೇಳಿದರು. ಆದರೆ ಮೃತರಿಗೆ ತಲಾ 50 ಲಕ್ಷ ಕೊಡುವಂತೆ ಸ್ಥಳೀಯರು ಆಗ್ರಹಿಸಿದರು. ಇದನ್ನೂ ಓದಿ: ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಸ್ಟೋರ್ – ಪತಿಯನ್ನು ಹತ್ಯೆ ಮಾಡಿದ್ದು ಯಾಕೆ?