ಶ್ರೀನಗರ: ಭಯೋತ್ಪಾದನ ಕೃತ್ಯಗಳನ್ನು ನಡೆಸಲು ಉಗ್ರರೊಂದಿಗೆ ಕೈ ಜೋಡಿಸಿದ್ದ ಇಬ್ಬರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಫಾರೂಕ್ ಮತ್ತು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಬುಧಾಲ್ ಪ್ರದೇಶದ ಬೆಹ್ರೋಟ್ ಗ್ರಾಮದಲ್ಲಿ ಶೋಧ ಕಾರ್ಯ ನಡೆಸಿದಾಗ ಸಂದರ್ಭದಲ್ಲಿ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ. ಆರೋಪಿಗಳು ಉಗ್ರರಿಗೆ ಮಾಹಿತಿ ನೀಡುವುದು ಸೇರಿದಂತೆ ಅನೇಕ ರೀತಿಯ ನೆರವು ನೀಡಿರುವ ಶಂಕೆ ಇದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ಗುಡ್‍ನ್ಯೂಸ್
Advertisement
Advertisement
ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮ್ಯಾಗ್‍ಜಿನ್, 30 ಸಜೀವ ಗುಂಡುಗಳು, ಎರಡು ಹ್ಯಾಂಡ್ ಗ್ರೆನೇಡ್ ಮತ್ತು ವೈರ್ ಕಟ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಇತ್ತೀಚೆಗೆ ಕಾಶ್ಮೀರದಲ್ಲಿ ಸೇನೆ (Indian Army) ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇದಾದ ಬಳಿಕ ಸೇನೆ ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸ್ಥಳೀಯವಾಗಿ ಉಗ್ರರಿಗೆ ನೆರವು ನೀಡುವವರ ಮಾಹಿತಿ ಕಲೆ ಹಾಕಿ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಟಿಪ್ಪರ್, ಕಾರಿನ ನಡುವೆ ಭೀಕರ ಅಪಘಾತ ಬಾಲಕಿ ಸೇರಿ ಇಬ್ಬರ ಸಜೀವ ದಹನ