ಚಿತ್ರದುರ್ಗ: ಎತ್ತಿನಗಾಡಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಬಳಿ ನಡೆದಿದೆ.
ಮಲ್ಕಾಪುರ ಗ್ರಾಮದ ಪಾಲಯ್ಯ (28) ಮತ್ತು ವಿಜಿಯಪ್ಪ (30) ಮೃತ ದುರ್ದೈವಿಗಳು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಏಳು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎತ್ತಿನಗಾಡಿಯಲ್ಲಿ ಮಲ್ಕಾಪುರದಿಂದ ಚಿತ್ರಹಳ್ಳಿಯ ಚಿತ್ರಲಿಂಗೇಶ್ವರ ಅಂಬಿನೋತ್ಸವಕ್ಕೆ ಹೋಗುತ್ತಿದ್ದರು. ಈ ವೇಳೆ ಮಧ್ಯರಾತ್ರಿ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಪಾಲಯ್ಯ ಮತ್ತು ವಿಜಿಯಪ್ಪ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಹೊಳಲ್ಕೆರೆ ಮತ್ತು ದಾವಣಗೆರೆ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv