Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
Last updated: February 8, 2026 11:25 pm
Public TV
Share
2 Min Read
two people die after drinking spirit one in critical condition two detained in koppal
SHARE

ಕೊಪ್ಪಳ: ತಾಲೂಕಿನ (Koppal) ಕೂಕನಪಳ್ಳಿ ಗ್ರಾಮದಲ್ಲಿ  ಸ್ಪಿರಿಟ್ (Spirit) ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಕೂಕನಪಳ್ಳಿ ಗ್ರಾಮದ ಅಮರಯ್ಯ ಹಿರೇಮಠ (35) ಹಾಗೂ ರಮೇಶ ಹೊಸಹಳ್ಳಿ (25) ಮೃತಪಟ್ಟಿದ್ದು, ಶರಣಪ್ಪ ಹಂಚಿನಾಳ ಎಂಬವನ ಸ್ಥಿತಿ ‌ಚಿಂತಾಜನಕವಾಗಿದೆ. ಮೃತ ಅಮರಯ್ಯ ಜೆಸ್ಕಾಂ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ರಮೇಶ ಹೊಸಹಳ್ಳಿ ತಂದೆ – ತಾಯಿಗೆ ಒಬ್ಬನೇ ಮಗನಾಗಿದ್ದ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಜೊತೆಗೆ ರಾತ್ರಿ ಊಟ ಮಾಡಿದ್ದ ಮತ್ತು ಎಲ್ಲರಿಗೂ ಸ್ಪಿರಿಟ್ ಕುಡಿಸಿದ್ದ ಮಾರುತಿ ಬಂಡಿ ಹಾಗೂ ಶರಣಪ್ಪ ಗುರಿಕಾರ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

two people die after drinking spirit one in critical condition two detained in koppal 1

ಘಟನೆ ವಿವರ: ಐವರು ಸ್ನೇಹಿತರು ಕಳೆದ ಫೆ.4 ರಂದು ಪಾರ್ಟಿ ಮಾಡಿದ್ದರು. ಅಮರಯ್ಯ ಹಿರೇಮಠ ಹಾಗೂ ಶರಣಪ್ಪ ಹಂಚಿನಾಳ ಸ್ಪಿರಿಟ್ ಕುಡಿದಿದ್ದಾರೆ. ಆದರೆ, ಮಾರುತಿ ಬಂಡಿ, ಶರಣಪ್ಪ ಗುರಿಕಾರ ಹಾಗೂ ರಮೇಶ್ ಸ್ಪಿರಿಟ್ ಕುಡಿದಿರಲಿಲ್ಲ. ಮರು ದಿನವೇ ಸ್ಪಿರೀಟ್ ಕುಡಿದಿದ್ದ ಇಬ್ಬರೂ ಅಸ್ವಸ್ಥಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ದಾಖಲಾಗಿದ್ದರು. ಈ ಪೈಕಿ ಅಮರಯ್ಯ ಮೃತಪಟ್ಟಿದ್ದು,‌ ಪೊಲೀಸರು ಜೊತೆಗಿದ್ದ ಮೂವರನ್ನು ವಶಕ್ಕೆ ಪಡೆದು ‌ವಿಚಾರಣೆ ಮಾಡಿದ್ದಾರೆ. ಇದರಿಂದ ಆತಂಕಗೊಂಡ ರಮೇಶ ಪೊಲೀಸ್ ಠಾಣೆಯಿಂದ ಮನೆಗೆ ಬಂದು ಮತ್ತದೇ ಸ್ಪಿರೀಟ್ ಸೇವನೆ ಮಾಡಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ. ಇದೀಗ ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕೊಪ್ಪಳ ತಾಲೂಕಿನ ದದೇಗಲ್ ಗ್ರಾಮದ ವಾಟರ್ ಸರ್ವಿಸ್ ಮಾಡುವ ಮಾರುತಿ ಬಂಡಿ ಸ್ಪಿರಿಟ್ ತಂದಿದ್ದು, ಸರಾಯಿ ಎಂದು ಹೇಳಿ ಎಲ್ಲರಿಗೂ ಕೊಟ್ಟಿದ್ದಾನೆ. ಅವನ ‌ಮಾತು ನಂಬಿದ ರಮೇಶ, ಶರಣಪ್ಪ ಹಂಚಿನಾಳ, ಅಮರಯ್ಯ ಹಿರೇಮಠ ಗ್ರಾಮದ ಹೊಲದಲ್ಲಿ ಬುಧವಾರ (ಫೆ.4) ರಾತ್ರಿ ಕುಡಿದು ಅಸ್ವಸ್ಥಗೊಂಡಿದ್ದರು. ಈ ಸಂಬಂಧ ಮೃತ ರಮೇಶ ತಂದೆ ಯಮನಪ್ಪ ಹೊಸಹಳ್ಳಿ ನೀಡಿದ ದೂರಿನ ಅನ್ವಯ ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 15 ದಿನಗಳ ಹಿಂದೆಯೆ ಮಾರುತಿ ಸ್ಪಿರಿಟ್ ಸಂಗ್ರಹಿಸಿದ್ದ ಎನ್ನಲಾಗಿದೆ. ಪೊಲೀಸರು ಮಾತ್ರ ಅದು ಗೋವಾದ ಕಾಜು ಮದ್ಯ ಎಂದುಕೊಂಡು ಸ್ಪಿರಿಟ್ ಸೇವನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಸ್ಪಿರಿಟ್ ಕುಡಿದು ಮೃತ ಪಟ್ಟಿದ್ದಾರೆಯೇ? ಅಥವಾ ಕುಡಿಯುವಾಗ ಏನಾದರೂ ಮಿಕ್ಸ್ ಮಾಡಿದ್ದಾರಾ ಎಂಬ ಅನುಮಾನ ಈಗ ಹುಟ್ಟಿಕೊಂಡಿದೆ. ಜೊತೆಗೆ ಸಾವಿಗೆ ಕಾರಣವಾದ ಸ್ಪಿರಿಟ್ ಬಂದ ಮೂಲ ಪತ್ತೆ ಮಾಡುವುದು ಕೂಡ ಪೊಲೀಸರಿಗೆ ಸವಾಲಾಗಿದೆ.

TAGGED:crimeKoppalSpirit
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
14 minutes ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
26 minutes ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
9 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
10 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
10 hours ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?