ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದಾಗ ಕಾರು ಕೆರೆಗೆ ಉರುಳಿ ಬಿದ್ದು ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಕುಂತೂರು ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮೈಸೂರು ಮೂಲದ ಸುರ್ಜಿತ್ (25) ಗಣಗನೂರಿನ ಶುಭಾ (21) ಸಾವನ್ನಪ್ಪಿದ್ದಾರೆ.
ಮನ್ವಿತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹದೇಶ್ವರ ಬೆಟ್ಟಕ್ಕೆ ಟೊಯೋಟಾ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಕೆರೆಗೆ ಬಿದ್ದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.