ಶಿವಮೊಗ್ಗ: ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಮಲೆನಾಡಿನಲ್ಲಿ (Malenadu) ಆರಂಭವಾಗಿದೆ. ಹೋರಿ (Bull) ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಮಾಡಿದ ಅವಂತಾರದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Advertisement
ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಬಹಳ ಮಹತ್ವ ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುತ್ತದೆ. ಇಂತಹ ಸಮಯದಲ್ಲಿ ಹೋರಿಗಳನ್ನು ಹಿಡಿದು ನಿಲ್ಲಿಸುವುದಕ್ಕೆ ಪೈಲ್ವಾನರು (Pailwan) ತಮ್ಮ ಜೀವದ ಹಂಗು ತೊರೆದು ಕಸರತ್ತು ನಡೆಸುತ್ತಾರೆ. ಅಲ್ಲದೇ ಅಖಾಡದಲ್ಲಿ ಹೋರಿ ಓಡುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ಜನ ಸೇರುತ್ತಾರೆ. ಪೈಲ್ವಾನನ ಕೈಗೆ ಸಿಗದೇ ಓಡುವ ಹೋರಿಯ ದೃಶ್ಯ ನೋಡುಗರ ಮೈನವಿರೇಳಿಸುತ್ತದೆ.
Advertisement
Advertisement
ಸದ್ಯ ಮಲೆನಾಡನಲ್ಲಿ ಶುರುವಾಗಿರುವ ಹೋರಿ ಬೆದರಿಸುವ ಹಬ್ಬದ ಸಮಯದಲ್ಲಿ ಇಬ್ಬರು ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ (Shikaripura) ತಾಲೂಕಿನ ಗಾಮ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಮತ್ತು ಸೊರಬ (Soraba) ತಾಲೂಕಿನ ಜಡೆ ಗ್ರಾಮದ ಚಗಟೂರು ನಿವಾಸಿ ಆದಿ (20) ಮೃತ ದುರ್ದೈವಿಗಳಾಗಿದ್ದಾರೆ. ಇದನ್ನೂ ಓದಿ: ದೇಗುಲ ಸ್ಫೋಟಿಸಲು ಬಂದಿದ್ದ ಬಾಂಬರ್ – ಸಾಹಿತ್ಯ ಓದಿಕೊಂಡೇ ISIS ಮೂಲಭೂತವಾದಿಯಾಗಿದ್ದ
Advertisement
ಹೋರಿ ಬೆದರಿಸುವ ಸಂದರ್ಭದಲ್ಲಿ ಬೆದರಿದ ಹೋರಿ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ ವಾಪಸ್ ನುಗ್ಗಿದೆ. ಈ ವೇಳೆ ಪ್ರಶಾಂತ್ ಮೈಮೇಲೆ ಹಾರಿ, ಎದೆ ಮೇಲೆ ಕಾಲಿಟ್ಟು ಹೋರಿ ಮುಂದಕ್ಕೆ ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಶಾಂತ್‍ರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ರಾತ್ರಿ ಪ್ರಶಾಂತ್ ಮೃತಪಟ್ಟಿದ್ದಾರೆ. ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಆದಿ ಎಂಬ ಯುವಕ ಹೋರಿ ತಿವಿತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸಿಗರೇಟು ಸೇದೋಕೆ ಕಾರು ನಿಲ್ಲಿಸಿದ ಮಾಲೀಕ – 75 ಲಕ್ಷ ಹಣದೊಂದಿಗೆ ಚಾಲಕ ಎಸ್ಕೇಪ್