ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದ ಬಳಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಚ್ಚಿದಾನಂದ ಹಾಗೂ ಗೌರಿಬಿದನೂರು ತಾಲೂಕು ರಾಮಚಂದ್ರಪುರ ಗ್ರಾಮದ ನರೇಶ್ ಬಾಬು ಮೃತ ಯುವಕರು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು
2ನೇ ಶನಿವಾರದ ಹಿನ್ನೆಲೆ ಮೆಡಿಕಲ್ ಕಾಲೇಜಿಗೆ ರಜೆ ಇದ್ದುದರಿಂದ ಸಚ್ಚಿದಾನಂದ ತನ್ನ 4 ಮಂದಿ ಸ್ನೇಹಿತರೊಂದಿಗೆ ಆಟೋ ಮೂಲಕ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದ. ಈ ವೇಳೆ ಸಚ್ಚಿದಾನಂದ ಜಲಾಶಯದ ಮುಂಭಾಗದ ಬಳಿ ಇರುವ ಹೊಂಡದಲ್ಲಿ ಈಜಲು ಹೋಗಿ, ನೀರಿನಲ್ಲಿ ಮುಳುಗಿದ್ದಾನೆ. ಸಚ್ಚಿದಾನಂದನ ರಕ್ಷಣೆಗೆ ಹೋಗಿದ್ದ ನರೇಶ್ ಬಾಬು ಕೂಡಾ ಸಚ್ಚಿದಾನಂದನ ಜೊತೆಯಲ್ಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧ ಹೃದಯಾಘಾತದಿಂದ ಸಾವು
ಜನ ನೋಡ ನೋಡುತ್ತಿದ್ದಂತೆಯೇ ಇಬ್ಬರು ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ವಿಷಯ ತಿಳಿದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಇಬ್ಬರ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.