ಬೆಂಗಳೂರು: ಪ್ರಚಾರದ ಗೀಳಿಗೆ ಬಿದ್ದು ಮೂಕ ಸನ್ನೆ ಮೂಲಕ ಮಾತು ಬಾರದವರಿಗೆ ಅವಮಾನ ಮಾಡಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು (Cyber Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೋಹನ್ ಕಾರಿಯಪ್ಪ ಮತ್ತು ಶರವಣ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಿವುಡ ಮತ್ತು ಮೂಗರ ಭಾಷೆಯನ್ನು ಅಶ್ಲೀಲ ಮೂಕ ಸನ್ನೆ ಮೂಲಕ ಅವಮಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಬಂಧಿತ ರೋಹನ್ ಕಾರಿಯಪ್ಪ ರೇಡಿಯೊ ಜಾಕಿಯಾಗಿ ಕೆಲಸ ಮಾಡುತ್ತಿದ್ದ. ಮತ್ತೋರ್ವ ಆರೋಪಿ ಶರವಣ ಯಾವ ಕೆಲಸ ಮಾಡದೇ ಮನೆಯಲ್ಲೇ ಇದ್ದ. ವಿದ್ಯಾವಂತ ಯುವ ರಾಜಕಾರಣಿಗಳನ್ನ ಅಣಕಿಸೋ ಭರದಲ್ಲಿ ಮಾತು ಬಾರದ ಮೂಗರು ಬಳಸೋ ಸನ್ನೆಯ ಮೂಲಕ ಅಶ್ಲೀಲವಾಗಿ ಅವಹೇಳನ ಮಾಡಿ ರೀಲ್ಸ್ ಮಾಡಿದ್ದರು.
Advertisement
Advertisement
ರೋಹನ್ ಹಿಂದಿಯಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ರೆ, ಶರವಣ ಅದನ್ನು ಮೂಕ ಸನ್ನೆಯಲ್ಲಿ ಅವಹೇಳನ ಮಾಡಿದ್ದ. ಆರೋಪಿ ಶರವಣ ಮೂಕ ಸನ್ನೆಯನ್ನು ಕಲಿತವನಾಗಿದ್ದು, ತಾನು ಮಾಡ್ತಿರೋದು ತಪ್ಪು ಎಂದು ಗೊತ್ತಿದ್ದು ಸಹ ವೀಡಿಯೋ ಮಾಡಿದ್ದ ಎಂದು ತಿಳಿದು ಬಂದಿದೆ.
Advertisement
ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವು ಸಂಘಟಗಳು ದೆಹಲಿಯಲ್ಲಿ ದೂರು ದಾಖಲಿಸಿದ್ದವು. ಬಳಿಕ ಬೆಂಗಳೂರಿನವರು ಎಂದು ಗೊತ್ತಾಗಿ ಕಮಿಷನರ್‌ಗೆ ದೂರು ನೀಡಲಾಗಿತ್ತು. ನಂತರ ಈ ಬಗ್ಗೆ ಸಿಸಿಬಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ.
ಇನ್ನೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದ ಆರೋಪಿಗಳು, ಅಪಾಲಜಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ತಿಳಿದು ಬಂದಿದೆ.