ರಾಯಚೂರು: ಜಿಲ್ಲೆಯಲ್ಲಿ ಹೋಳಿ ಆಚರಣೆ ಬಳಿಕ ಸ್ನಾನಕ್ಕೆಂದು ಕೆರೆಗೆ ತೆರಳಿ ನಾಪತ್ತೆಯಾಗಿದ್ದ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ರಾಯಚೂರು (Raichuru) ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಸ್ನಾನಕ್ಕೆಂದು ಹೊಂಡಕ್ಕೆ ಜಿಗಿದ ಓರ್ವ ವ್ಯಕ್ತಿ ನೀರು ಪಾಲಾಗಿದ್ದರು. ನಾಪತ್ತೆಯಾಗಿದ್ದವರನ್ನು ಜಾಗೀರವೆಂಕಟಾಪುರ ಗ್ರಾಮದ ಸೋಮನಗೌಡ (45) ಎಂದು ತಿಳಿಯಲಾಗಿದ್ದು, ಇದೀಗ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾ ರಾವ್ ಆಪ್ತ ವಶಕ್ಕೆ
ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ರಾಯಚೂರು ತಾಲೂಕಿನ ಆರ್‌ಡಿಎಸ್ ಕಾಲುವೆಗೆ ಸ್ನಾನಕ್ಕೆಂದು ಹೋಗಿದ್ದ ಯರಗೇರಾ ಗ್ರಾಮದ ಮಹಾದೇವ (30) ನಾಪತ್ತೆಯಾಗಿದ್ದರು. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸಿತ್ತು.
ಶನಿವಾರ ಬೆಳಿಗ್ಗೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನಿಮ್ಮ ಉಗ್ರವಾದದ ದಾಖಲೆ ಪ್ರಪಂಚದ ಮುಂದಿದೆ: ಕಾಶ್ಮೀರದ ಬಗ್ಗೆ ಮಾತನಾಡಿದ ಪಾಕ್‌ಗೆ ಭಾರತ ತಿರುಗೇಟು