ಮುಂಬೈ: ತರಬೇತಿ ವೇಳೆ ವಿಮಾನವೊಂದು (Aircraft) ಪತನಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುಣೆಯ (Pune) ಗೊಜುಬಾವಿ ಎಂಬಲ್ಲಿ ನಡೆದಿದೆ.
ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ತರಬೇತಿಯಲ್ಲಿದ್ದ ಪೈಲಟ್ ಮತ್ತು ತರಬೇತಿ ನೀಡುತ್ತಿದ್ದ ಶಿಕ್ಷಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್ ಖಚಿತ
ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]