ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
Advertisement
ಪ್ರತಿಭಟನೆ ನಿಯಂತ್ರಣ ವೇಳೆ ಕರ್ತವ್ಯ ಲೋಪ ಆರೋಪದಡಿ ಜೆ.ಸಿ.ನಗರ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪಿಎಸ್‌ಐ ರಾಜ್ ಸಾಬ್ ಹಾಗೂ ಹೆಡ್‌ಕಾನ್‌ಸ್ಟೇಬಲ್ ಶ್ರೀನಿವಾಸ್ ಮೂರ್ತಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಿ ಡಿಸಿಪಿ ವಿನಾಯಕ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು
Advertisement
Advertisement
ಪಿಎಸ್‌ಐ ರಾಜ್‌ಸಾಬ್ ಅವರಿಗೆ ಪ್ರಭಾರಿ ಠಾಣಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು. ಪ್ರತಿಭಟನೆ ವೇಳೆ ತ್ವರಿತವಾಗಿ ಸ್ಥಳಕ್ಕೆ ಹೋಗದಿರುವುದರಿಂದ ಹೋರಾಟ ತೀವ್ರಗೊಂಡಿತು. ಪ್ರತಿಭಟನಾನಿರತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಈ ವೇಳೆ ತ್ವರಿತ ಕ್ರಮಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆಂದು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್
Advertisement
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಅನೇಕ ಬಿಜೆಪಿ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿತ್ತು.