ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರು (Pourakarmikas) ಇಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ ಎಂಬ ಆರೋಪ ಕೇಳಿಬಂದಿದೆ.
ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತ್ಯಪ್ಪ (45) ಹಾಗೂ ಮೈಲಪ್ಪ (42) ಸಾವನ್ನಪ್ಪಿದ ಪೌರಕಾರ್ಮಿಕರು. ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
ಯುಗಾದಿ ಹಬ್ಬದ ಹಿನ್ನೆಲೆ ಬಹುದಿನಗಳಿಂದ ತುಂಬಿದ್ದ ಚರಂಡಿ ಸ್ವಚ್ಛತೆಗೆ ಬಸವನಕೋಟೆ ಗ್ರಾಪಂ ಪಿಡಿಓ ಶಶಿಧರ ಪಾಟೀಲ್ ಆದೇಶ ಹೊರಡಿಸಿದ್ದರು. ಪಿಡಿಓ ಅದೇಶದ ಹಿನ್ನೆಲೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಸತ್ಯಪ್ಪ ಮತ್ತು ಮೈಲಪ್ಪ ಚರಂಡಿ ಸ್ವಚ್ಛತೆ ಮಾಡಿದ್ದಾರೆ.
ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರೂ ಅಸ್ವಸ್ಥರಾಗಿದ್ದರು. ತೀವ್ರ ಅಸ್ವಸ್ಥಗೊಂಡ ಕಾರ್ಮಿಕರನ್ನು ಹತ್ತಿರದ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾದ ಹಿನ್ನೆಲೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ: ಕುಡಿದು ಗಲಾಟೆ ಮಾಡುತ್ತಿದ್ದವನ ಪ್ರಶ್ನೆ ಮಾಡಿದ ಸಂಬಂಧಿಯನ್ನೇ ಕೊಂದ- ಮತ್ತೋರ್ವನಿಗೆ ಗಾಯ
ಚಿಕಿತ್ಸೆ ಫಲಕಾರಿ ಆಗದೇ ಇಬ್ಬರೂ ಪೌರಕಾರ್ಮಿಕರು ಮೃತಪಟ್ಟಿದ್ದಾರೆ. ಬೀಳಚೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.