ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.
ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ
ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು
Web Stories