ಅಮರಾವತಿ: ಆಂಧ್ರಪ್ರದೇಶದ (Andhra Pradesh) ಚೋಡವರಂ ಸಬ್-ಜೈಲಿನಲ್ಲಿ ಜೈಲಧಿಕಾರಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಇಬ್ಬರು ಕೈದಿಗಳು (Prisoners) ಪರಾರಿಯಾಗಿರುವ ಘಟನೆ ನಡೆದಿದೆ.
ಪಿಂಚಣಿ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕ ರವಿಕುಮಾರ್, ಜೈಲಿನ ಅಡುಗೆ ಕೋಣೆ ಬಳಿ ಜೈಲಧಿಕಾರಿ ವಾಸ ವೀರರಾಜು ಅವರ ಮೇಲೆ ಹಲ್ಲೆ ಮಾಡಿದ್ದ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಕೇರಳ ಕಮ್ಯುನಿಸ್ಟ್ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್
ಕೂಡಲೇ ಜೈಲಧಿಕಾರಿಗಳು ನೆರೆಯ ಪೊಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡಿದ್ದು, ಪರಾರಿಯಾದ ಕೈದಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಜೈಲಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 
					
 
		 
		 
		 
		 
		 
		 
		 
		 
		