ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿದ್ದು, ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಬಂಟ್ವಾಳದಲ್ಲಿ (Bantwal) ನಡೆದಿದೆ.
ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಘಟನೆ ನಡೆದಿದ್ದು, ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಸೇರಿ ಮರಕುಂಬಿಯ 99 ಅಪರಾಧಿಗಳಿಗೆ ಜಾಮೀನು
ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶಾಲಾ ಮಕ್ಕಳ ವಾಹನ ಅಪಘಾತದ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದೆ.