ರಾಯ್ಪುರ: ನಕ್ಸಲರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ (Security Personnel) ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.
ನಕ್ಸಲ್ ಕೇಂದ್ರಿತ ಪ್ರದೇಶವಾದ ನಾರಾಯಣಪುರ (Narayanpur) ಜಿಲ್ಲೆಯ ಅಬುಜ್‌ಮಾರ್‌ನಲ್ಲಿ ಘಟನೆ ನಡೆದಿದೆ. ಗಾರ್ಪಾ ಗ್ರಾಮದ ಬಳಿ ಭದ್ರತಾ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ. ಇದನ್ನೂ ಓದಿ: Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್ ಸಿಲಿಂಡರ್ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ
ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೊದಲು ನೆರೆಯ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟದಲ್ಲಿ ಕೋಬ್ರಾದ ಇಬ್ಬರು ಕಮಾಂಡೋಗಳು ಗಾಯಗೊಂಡಿದ್ದರು. ಇದನ್ನೂ ಓದಿ: ಸಂಸದ ಡಾ.ಮಂಜುನಾಥ್ ನೇತೃತ್ವದಲ್ಲಿ ದಿಶಾ ಸಭೆ – ಅಧಿಕಾರಿಗಳಿಗೆ ಶಿಸ್ತಿನ ಪಾಠ
ಜನವರಿ 6 ರಂದು ಬಿಜಾಪುರದಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟಗೊಂಡು ಎಂಟು ಪೊಲೀಸರು ಮತ್ತು ಚಾಲಕ ಸಾವನ್ನಪ್ಪಿದ್ದರು. ಇದನ್ನೂ ಓದಿ: 2027ರ ವೇಳೆಗೆ ಮೈಸೂರು-ಕುಶಾಲನಗರ 4 ಪಥದ ರಸ್ತೆ ಕಾಮಗಾರಿ ಪೂರ್ಣ – ಯದುವೀರ್