ರಾಯಚೂರು: ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ದೇವದುರ್ಗದಲ್ಲಿ (Devadurga) ನಡೆದಿದೆ.
ಮಿಯಾಪುರ ಕ್ರಾಸ್‌ನಲ್ಲಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಮಲ್ಲಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂಡಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಸಾರಿಗೆ ಬಸ್ (Bus) ದೇವದುರ್ಗದ ಕಡೆ ಹೊರಟಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು (Car) ನಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಇನ್ನೂ ದೇವದುರ್ಗ ತಾಲೂಕಿನ ಹೆಚ್‌ಎಂ ನಾಯಕ್ ತಾಂಡದಲ್ಲಿ ವೃದ್ಧೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಬದಿ ಬಸ್‌ಗಾಗಿ ಕಾಯುತ್ತಾ ನಿಂತಿದ್ದ 60 ವರ್ಷದ ಡಾಕಮ್ಮಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಅಪಘಾತ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಆರಂಭ – ಕ್ಷಣಾರ್ಧದಲ್ಲಿ ಸಿಗುತ್ತೆ ಬಿಪಿ, ಶುಗರ್, ಮಲೇರಿಯಾ ರಿಪೋರ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]