ಮಂಗಳೂರು: ಹೊರವಲಯದ ಪಣಂಬೂರು ಸಿಗ್ನಲ್ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸರಣಿ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ.
ಆಟೋ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಗ್ನಲ್‌ನಲ್ಲಿ ಟ್ಯಾಂಕರ್‌ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೋ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿದೆ. ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.
ಮತ್ತೊಂದ್ಕಡೆ, ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಸರ್ಕಲ್‌ಗೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿ, 6 ಮಂದಿಗೆ ಗಾಯಗೊಂಡಿದ್ದಾರೆ. ಬೆಂಗಳೂರು ಪೀಣ್ಯ ನಿವಾಸಿಗಳಾದ 64 ವರ್ಷದ ರವಿ, 23 ವರ್ಷದ ರಮ್ಯ, 75 ವರ್ಷದ ನಂಜಮ್ಮ (75) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

