ಜನರನ್ನು ಲೆಕ್ಕಿಸದೇ ಗುಂಡು ಹಾರಿಸಿದ ದುಷ್ಕರ್ಮಿಗಳು – ಸಹೋದರನನ್ನು ಕಾಪಾಡಲು ಹೋಗಿ ಸಹೋದರಿಯರಿಬ್ಬರು ಬಲಿ

Public TV
2 Min Read
delhi sisters

ನವದೆಹಲಿ: ಸಹೋದರನ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ತಡೆಯಲು ಹೋಗಿ ನೆರೆದವರೆದುರಲ್ಲೇ ಸಹೋದರಿಯರಿಬ್ಬರು (Sisters) ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಗುಂಡೇಟಿನ ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಘಟನೆ ಭಾನುವಾರ ದೆಹಲಿಯ ಆರ್‌ಕೆ ಪುರಂ (RK Puram) ಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಕರು ಸ್ಥಳದಲ್ಲೇ ನೆರೆದಿದ್ದ ಹತ್ತಾರು ಜನರನ್ನು ಲೆಕ್ಕಿಸದೇ ಗುಂಡುಗಳನ್ನು ಹಾರಿಸಿದ್ದಾರೆ. ತಮ್ಮ ಸಹೋದರನ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ತಡೆಯಲು ಹೋದ ಸಹೋದರಿಯರಾದ ಪಿಂಕಿ (30) ಹಾಗೂ ಜ್ಯೋತಿ (29) ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

ಹಣದ ವಿಚಾರಕ್ಕೆ ದುಷ್ಕರ್ಮಿಗಳು ಮೃತ ಮಹಿಳೆಯರ ಸಹೋದರನನ್ನು ಹುಡುಕಿಕೊಂಡು ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಹತ್ತಾರು ಜನರಿದ್ದರೂ ಕಿಡಿಗೇಡಿಗಳು ನಿರ್ಭೀತರಾಗಿ ಗುಂಡು ಹಾರಿಸಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಆದರೂ ಅವರು ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಸುಧಾರಿಸುವ ಬದಲು ಕೇಂದ್ರ ಸರ್ಕಾರ ಇಡೀ ದೆಹಲಿಯ ಮೇಲೆ ಹಿಡಿತ ಸಾಧಿಸುವ ಪ್ರಯತ್ನದಲ್ಲಿ ನಿರತವಾಗಿದೆ ಎಂದು ಟೀಕಿಸಿದ್ದಾರೆ.

ಇದೀಗ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯ ಆರೋಪದ ಜೊತೆ ಕೊಲೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಪ್ರೇಮಿಗಳಿಬ್ಬರ ದುರಂತ ಅಂತ್ಯ

Share This Article