ಶಿವಮೊಗ್ಗ: ಚುನಾವಣಾ (Election) ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ (Suspend) ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.
ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ (Election Officer) ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ (Meggan Hospital) ಕಳುಹಿಸಿದ್ದರು. ಇದನ್ನೂ ಓದಿ: ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್‌ಸ್ಪೆಕ್ಟರ್ ಅಮಾನತು
Advertisement
Advertisement
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಹುಲ್ ದ್ರಾವಿಡ್ ಸ್ವಾಗತ ಕಮಾನು – ಯಂಗ್ ವೋಟರ್ಸ್ ಸೆಳೆಯಲು ಯುವ ಮತಗಟ್ಟೆ
Advertisement