ಬೆಂಗಳೂರು: ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಮನೆ (Home) ಕುಸಿದ ಘಟನೆ ಬೆಂಗಳೂರಿನ (Bengaluru) ಭೀಮಾ ನಗರದ ತಿಪ್ಪಸಂದ್ರದಲ್ಲಿ (Thippasandra) ನಡೆದಿದೆ.
ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸದ್ಯ ಮನೆಯಲ್ಲಿದ್ದ ಎಲ್ಲರನ್ನೂ ಪೊಲೀಸರು ಹೊರ ಕಳುಹಿಸಿದ್ದಾರೆ. ಸಂಜೆ 4:15ರ ಸುಮಾರಿಗೆ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಐದು ಬಾಡಿಗೆ ಮನೆಗಳಿದ್ದವು. ಕಟ್ಟಡ ಕುಸಿದ ವೇಳೆ ಮನೆಯಲ್ಲಿದ್ದವರು ಹೊರಗೆ ಓಡಿದ್ದಾರೆ. ಇದನ್ನೂ ಓದಿ: ಅಮಾನವೀಯವಾಗಿ ಮೃತ ಕಾರ್ಮಿಕನ ಶವ ಎಳೆದೊಯ್ದ 6 ಮಂದಿ ವಿರುದ್ಧ ಎಫ್ಐಆರ್
ಬೇಸ್‌ಮೆಂಟ್‌ನಲ್ಲಿ ಐದಕ್ಕೂ ಹೆಚ್ಚು ಬೈಕ್‌ಗಳು ಜಖಂಗೊಂಡಿವೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಕಟ್ಟಡ ಕುಸಿಯುವ ವೇಳೆ ಆರು ಜನರಿದ್ದರು. ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಕಟ್ಟಡ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಮನೆಯ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಬೋನಿ ದಾಖಲೆ ಮುರಿಯಲು ಸಜ್ಜಾದ ಸ್ನೇಹಿತೆ – 1,000 ಪುರುಷರೊಟ್ಟಿಗೆ ಸೆಕ್ಸ್ ಮಾಡಲು ಅನ್ನಿ ನೈಟ್ ತಯಾರಿ