ಮಂಗಳೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯಹೊಳೆಯಲ್ಲಿ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

