ಬೆಂಗಳೂರು: ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ ಪರಿಣಾಮ ಮರಕ್ಕೆ ಡಿಕ್ಕಿಯಾಗಿ (Accident) ಇಬ್ಬರು ಕಾಲೇಜು ವಿಧ್ಯಾರ್ಥಿಗಳು (Students) ಸ್ಥಳದಲ್ಲೇ ಸಾವಿಗೀಡಾದ ಘಟನೆ ಬನ್ನೇರುಘಟ್ಟ (Bannerughatta) ಸಮೀಪದ ರಾಗಿಹಳ್ಳಿ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ದೇವ ನಾರಾಯಣ (23) ಮತ್ತು ಸಾಹಿಲ್ (23) ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
Advertisement
Advertisement
ಸಿಫ್ಟ್ ಕಾರಿನಲ್ಲಿ ಅತಿವೇಗವಾಗಿ ಬಂದು ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ನಾಲ್ವರು ಕಳೆದ ರಾತ್ರಿ ಪಾರ್ಟಿ ಮಾಡಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.
Advertisement
Advertisement
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.