ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ (Rameshwaram Cafe) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಇವರಿಬ್ಬರು ನಕಲಿ ದಾಖಲಾತಿಗಳನ್ನು ನೀಡಿ ಕೋಲ್ಕತ್ತಾದಲ್ಲಿ ಮನೆಯನ್ನು ಬಾಡಿಗೆ ಪಡೆದಿದ್ದರು. ಬಾಡಿಗೆ ಪಡೆಯುವ ಮೊದಲು ಲಾಡ್ಜ್ ಗಳಲ್ಲಿ ಉಳಿದುಕೊಂಡಿದ್ದರು.
Advertisement
Advertisement
ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು.
Advertisement
Advertisement
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್ – ಈಗಾಗಲೇ A1 ಆರೋಪಿ ಅರೆಸ್ಟ್!
ಘಟನೆ ಏನು..?: ಮಾರ್ಚ್ 1 ರಂದು ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲಾಗಿದ್ದು, ಶಂಕಿತ ಉಗ್ರನ ಬಂಧನಕ್ಕೆ ಪೆÇಲೀಸರು ಬಲೆ ಬೀಸಿದ್ದಾರೆ. ಇತ್ತ ಘಟನೆ ನಡೆದು ವಾರದ ಬಳಿಕ ಅಂದರೆ ಮಹಾಶಿವರಾತ್ರಿಯಂದು ಕೆಫೆಯನ್ನು ರೀ ಓಪನ್ ಮಾಡಲಾಗಿದೆ.