ಇಸ್ಲಾಮಾಬಾದ್: ಅಲ್ಪಸಂಖ್ಯಾತ ಹಿಂದೂಗಳ (Hindu Community) ಮೇಲೆ ಪಾಕಿಸ್ತಾನದಲ್ಲಿ (Pakistan) ನಿರಂತರ ದೌರ್ಜನ್ಯ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮತ್ತೊಂದು ಘಟನೆ ನಡೆದಿದೆ.
ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಮಹಿಳೆ (Hindu Women) ಮತ್ತು ಇಬ್ಬರು ಬಾಲಕಿಯರನ್ನು ಕಿಡ್ನ್ಯಾಪ್ (Kidnap) ಮಾಡಲಾಗಿದ್ದು, ಅವರಲ್ಲಿ ಇಬ್ಬರನ್ನು ಬಲವಂತವಾಗಿ ಇಸ್ಲಾಂಗೆ (Islam) ಮತಾಂತರಿಸಿ, ಮದುವೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ
ಮೀನಾ ಮೇಘವಾರ್ (14) ಎಂಬ ಹಿಂದೂ ಬಾಲಕಿಯನ್ನು ನಾಸರ್‌ಪುರ ಪ್ರದೇಶದಿಂದ ಅಪಹರಿಸಲಾಗಿದೆ. ಮೀರ್‌ಪುರ್‌ಖಾಸ್ ಪಟ್ಟಣದ ಮಾರುಕಟ್ಟೆಯಿಂದ ಮನೆಗೆ ಹಿಂದಿರುಗುತ್ತಿದ್ದ ಮತ್ತೊಬ್ಬ ಬಾಲಕಿಯನ್ನೂ ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫ್ರೆಂಡ್ಸ್ ಜೊತೆ ಪಾರ್ಟಿಗೆ ಬಂದಿದ್ದ ಮಹಿಳೆ ಬಟ್ಟೆ ಹರಿದು ಬೌನ್ಸರ್ಸ್‍ನಿಂದ ಹಲ್ಲೆ
ಮತ್ತೊಂದೆಡೆ ವಿವಾಹಿತ ಹಿಂದೂ ಮಹಿಳೆಯೊಬ್ಬರು ಮೀರ್‌ಪುರ್‌ಖಾಸ್‌ನಿಂದ ಕಾಣೆಯಾಗಿದ್ದು, ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ನಂತರ ಅವರು ಮುಸ್ಲಿಂ (Muslim) ವ್ಯಕ್ತಿಯನ್ನು ವಿವಾಹವಾಗಿದ್ದಾರೆ. ಮಹಿಳೆಗೆ ಮೂರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಮಹಿಳೆಯ ಪತಿ ರವಿ ಕುರ್ಮಿ ಅವರು ದೂರು ನೀಡಿದ್ದು, ಎಫ್‌ಐಆರ್ (FIR) ದಾಖಲಿಸಲು ಪೊಲೀಸರು (Police) ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆರೆಯ ಅಹ್ಮದ್ ಚಾಂಡಿಯೊ ಎಂಬಾತ ತನ್ನ ಪತ್ನಿಗೆ ಹಿಂಸೆ ನೀಡುತ್ತಿದ್ದ. ಬಲವಂತವಾಗಿ ಅಪಹರಿಸಿ ಇಸ್ಲಾಂಗೆ ಮತಾಂತರಿಸಿದ್ದಾನೆ ಎಂದು ರವಿ ಆರೋಪಿಸಿದ್ದಾರೆ.
ಆದರೆ ವಿವಾಹಿತ ಮಹಿಳೆ ರಾಖಿ ತನ್ನ ಸ್ವಂತ ಇಚ್ಛೆಯ ಮೇರೆಗೆ ಮತಾಂತರಗೊಂಡಿರುವುದಾಗಿಯೂ, ಮುಸ್ಲಿಂ ಪುರುಷನನ್ನು ಮದುವೆಯಾಗಿರುವುದಾಗಿಯೂ ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮೂರೂ ಪ್ರಕರಣಗಳನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಮೀರ್‌ಪುರ್‌ಖಾಸ್ ಪೊಲೀಸರು ತಿಳಿಸಿದ್ದಾರೆ.