ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಜೌರಿಯಲ್ಲಿ (Rajouri) ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ (Terrorists) ನಡುವೆ ನಡೆದ 24 ಗಂಟೆಗಳ ಸುದೀರ್ಘ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ರಾಜೌರಿಯ ಕಲಕೋಟ್ ಅರಣ್ಯದಲ್ಲಿ ನಿನ್ನೆ (ಬುಧವಾರ) ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದರೆ. ಗಾಯಗೊಂಡಿದ್ದ ಮತ್ತೊಬ್ಬ ಯೋಧ ಇಂದು ಸಾವನ್ನಪ್ಪಿದ್ದಾರೆ.
ಹತ್ಯೆಯಾಗಿರುವ ಉಗ್ರರಲ್ಲಿ ಒಬ್ಬನನ್ನು ಪಾಕಿಸ್ತಾನ ಮೂಲದವನು ಎಂಬುದು ತಿಳಿದುಬಂದಿದೆ. ಆತನನ್ನು ಕ್ವಾರಿ ಎಂದು ಗುರುತಿಸಲಾಗಿದೆ. ಆತ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ತರಬೇತಿ ಪಡೆದಿದ್ದು, ಲಷ್ಕರ್-ಎ-ತೊಯ್ಬಾದ ಹಿರಿಯ ನಾಯಕನಾಗಿದ್ದ. ಆತ ತನ್ನ ಸಹಚರರೊಂದಿಗೆ ಕಳೆದ ವರ್ಷದಿಂದ ರಾಜೌರಿ-ಪೂಂಚ್ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: 18.70 ಲಕ್ಷ ವಂಚನೆ- ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ದೂರು ದಾಖಲು
ಈತ ಧಂಗ್ರಿ ಮತ್ತು ಕಂಡಿಯಲ್ಲಿ ನಡೆದ ಅವಳಿ ದಾಳಿಯ ಮಾಸ್ಟರ್‌ಮೈಂಡ್ ಎಂದು ನಂಬಲಾಗಿದೆ. ಈ ಪ್ರಕರಣದಲ್ಲಿ 7 ಜನರು ಸಾವನ್ನಪ್ಪಿದ್ದರು ಮತ್ತು 14 ನಾಗರಿಕರು ಗಾಯಗೊಂಡಿದ್ದರು. ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಮುಂದುವರಿಸಲು ರಾಜೌರಿ-ಪೂಂಚ್‌ಗೆ ತಂಡವನ್ನು ಕಳುಹಿಸಿದ್ದಾಗಿ ಮೂಲಗಳು ತಿಳಿಸಿವೆ.
ಕ್ವಾರಿ ಸುಧಾರಿತ ಸ್ಫೋಟಕ ಸಾಧನ (IED) ಎಕ್ಸ್‌ಪರ್ಟ್ ಆಗಿದ್ದು, ಅಲ್ಲಿನ ಗುಹೆಗಳಲ್ಲಿ ಅಡಗಿಕೊಂಡು ಕಾರ್ಯನಿರ್ವಹಿಸುತ್ತಿದ್ದ ಮತ್ತು ತರಬೇತಿ ಪಡೆದ ಸ್ನೈಪರ್ ಕೂಡ ಆಗಿದ್ದ. ಬುಧವಾರ ರಾಜೌರಿಯಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಇದರಲ್ಲಿ ವಿಶೇಷ ಪಡೆಗಳ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬದಲ್ಲಿ ನೀರವ ಮೌನ – ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ