ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ್ದ ಎನ್‍ಕೌಂಟರ್‌ನಲ್ಲಿ ಇಬ್ಬರು ಜೈಶ್ ಎ ಮೊಹಮ್ಮದ್ ಉಗ್ರರನ್ನು ಸದೆಬಡೆದಿದೆ.
ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆ ವೇಳೆ ಓರ್ವ ನಾಗರಿಕನಿಗೆ ಗಾಯವಾಗಿದೆ.
Advertisement
Killed JeM terrorists were categorised &identified as MohdRafi of Sopore & KaiserAshraf of Pulwama. Terrorist Rafi was earlier booked underPSA twice. Both were involved in several terror crime cases. As per input they were planning to attack civilians in Sopore area: ADGP Kashmir https://t.co/n0JY0CLlXt
— Kashmir Zone Police (@KashmirPolice) August 31, 2022
Advertisement
ಉಗ್ರರಿಬ್ಬರು ನಿಷೇಧಿತ ಭಯೋತ್ಪಾದನಾ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದರು. ಅಷ್ಟೇ ಅಲ್ಲದೇ ನಾಗರಿಕರ ಮೇಲೆ ದಾಳಿ ನಡೆಸಲು ಸಂಚನ್ನು ರೂಪಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಾನ್ಯತೆ ಇಲ್ಲದ ಮದರಸಾಗಳ ಆದಾಯ ಪರಿಶೀಲಿಸಲು ಮುಂದಾದ ಯುಪಿ ಸರ್ಕಾರ
Advertisement
Advertisement
ಹತ್ಯೆಯಾದ ಇಬ್ಬರು ಉಗ್ರರನ್ನು ಸೋಪೋರ್‌ನ ಮೊಹಮ್ಮದ್ ರಫಿ ಮತ್ತು ಪುಲ್ವಾಮಾದ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ. ಉಗ್ರ ರಫಿ ವಿರುದ್ಧ ಈ ಹಿಂದೆ ಎರಡು ಬಾರಿ ಪಿಎಸ್‍ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇಬ್ಬರೂ ಹಲವಾರು ಭಯೋತ್ಪಾದನಾ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ರೈಲಿನಲ್ಲಿ ಬಂದ ಪಾರ್ಸೆಲ್‍ಗಳನ್ನು ಬೀಸಾಡಿದ ಸಿಬ್ಬಂದಿ – ವೈರಲ್ ವೀಡಿಯೋಗೆ ರೈಲ್ವೆ ಇಲಾಖೆ ಸ್ಪಷ್ಟನೆ