ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ದಕ್ಷಿಣ ಆಫ್ರಿಕಾ ಸೇರಿದಂತೆ 10 ಹೈರಿಸ್ಕ್ ದೇಶಗಳ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, 10 ದೇಶಗಳಿಂದ ಕಳೆದ ಹತ್ತು ದಿನಗಳಲ್ಲಿ 584 ಜನ ಬಂದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದಿಂದ 94 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ಪೈಕಿ ಇಬ್ಬರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿದೆ. ಇಬ್ಬರಿಂದ ಸ್ಯಾಂಪಲ್ಸ್ ಪಡೆದು ರೂಪದ ತಳಿ ಎಂಬುದನ್ನು ಖಾತರಿಪಡಿಸಿಕೊಳ್ಳಲು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್
ಕೊರೊನಾ ವೈರಸ್ ಹೊಸ ರೂಪಾಂತರಿ “ಓಮಿಕ್ರಾನ್” ವಿಶ್ವವನ್ನು ತಲ್ಲಣಗೊಳಿಸಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಆಗಿದ್ದು, ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ