ಬೆಂಗಳೂರು: ಆಂಟಿಗಳಿಗೆ ಮೆಸೇಜ್ ಮಾಡ್ತೀಯಾ ಎಂದು ವ್ಯಕ್ತಿಯೊಬ್ಬನನನ್ನು ಇಬ್ಬರು ಅಪರಿಚಿತರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಾಗಮೋಹನ್ ಎಂಬ ವ್ಯಕ್ತಿಯ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಯಲಹಂಕ ನ್ಯೂಟೌನ್ ಬಳಿ ಇರುವ ಆಂಜನೇಯ ದೇವಸ್ಥಾನದ ಮುಂದೆ ಘಟನೆ ನಡೆದಿದೆ. ದೇವಸ್ಥಾನದಿಂದ ಹೊರ ಬರುತ್ತಿದ್ದಂತೆ ಮುಖಾಮೂತಿ ನೋಡದೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ರೇಡ್
ನಾಗಮೋಹನ್ ಅವರು ತನ್ನ ಪುತ್ರನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ಅಪರಿಚಿತರು, ಆಂಟಿಗಳಿಗೆ ಮೆಸೇಜ್ ಮಾಡ್ತೀಯಾ ಎಂದು ನಾಗಮೋಹನ್ ಅವರನ್ನು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ. ದೃಶ್ಯವನ್ನು ಕಂಡು ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಇಬ್ಬರೂ ಎಸ್ಕೇಪ್ ಆಗಿದ್ದಾರೆ.
ಹಲ್ಲೆಗೊಳಗಾದ ನಾಗಮೋಹನ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ 341, 504,323,324 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕ ಚುನಾವಣೆ – ಏ.26 ಕ್ಕೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ