ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮತ್ತೆ ಇಬ್ಬರು ಬಲಿ – ಸಿಎಂ ಒಮರ್‌ ಅಬ್ದುಲ್ಲಾ ಖಂಡನೆ

Public TV
2 Min Read
jammu and kashmir terror attack

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ (Kishtwar) ಜಿಲ್ಲೆಯಲ್ಲಿ ಉಗ್ರರ ದಾಳಿಗೆ ವಿಲೇಜ್ ಡಿಫೆನ್ಸ್ ಗ್ರೂಪ್ (Village Defence Group)ನ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕುಂಟ್ವಾರದ ಕಿಶ್ತ್ವಾರದ ಅರಣ್ಯ ಪ್ರದೇಶದಲ್ಲಿ ಭೀಕರವಾಗಿ ಹತ್ಯೆ ನಡೆದಿದೆ. ವಿಲೇಜ್ ಡಿಫೆನ್ಸ್ ಗ್ರೂಪ್‌ನ ಸದಸ್ಯರನ್ನು ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ವಿವಾದಕ್ಕೆ ಕಾರಣವಾದ ರಾಗಾ `ರೆಡ್‌ ಬುಕ್’ – ಸಂವಿಧಾನ ಪ್ರತಿ ಎಂದ ಪುಸ್ತಕದಲ್ಲಿ ಖಾಲಿ ಹಾಳೆ: ಫಡ್ನವಿಸ್‌ ಕೌಂಟರ್‌

Indian Army

ಇಲ್ಲಿನ ಕುಪ್ವಾರ (Kupwara) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಶಂಕಿತ ಉಗ್ರರ ದಾಳಿ ನಡೆದಿದೆ. ಅವರ ಮೃತದೇಹಗಳನ್ನು ಇನ್ನಷ್ಟೇ ಹೊರತೆಗೆಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್‌ ಕೇಸ್‌ – ಬಂಗಾಳದಿಂದ ಬೇರೆ ರಾಜ್ಯಕ್ಕೆ ಕೇಸ್‌ ವರ್ಗಾಯಿಸಲು ಸುಪ್ರೀಂ ನಕಾರ

farooq abdullah And omar abdullah

ಜೆ&ಕೆ ಸಿಎಂ ಒಮರ್ ಅಬ್ದುಲ್ಲಾ ಮತ್ತು ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಈ ದಾಳಿಯನ್ನು ಖಂಡಿಸಿದ್ದಾರೆ. ಇಂತಹ ಹಿಂಸಾಚಾರ, ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘಕಾಲ ಶಾಂತಿ ನೆಲೆಸಲು ಅಡ್ಡಿಯಾಗಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಜಪ್ತಿ:
ಶಂಕಿತ ಉಗ್ರರ ದಾಳಿಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ (Kupwara) ಜಿಲ್ಲೆಯಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್‌, ಎರಡು ಹ್ಯಾಂಡ್ ಗ್ರೆನೇಡ್‌, 4 ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಆರಂಭವಾಗಿತ್ತು. ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿತ್ತು. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಇದಕ್ಕೂ ಮುನ್ನ ನವೆಂಬರ್ 2 ರಂದು, ಹಳೆಯ ಶ್ರೀನಗರ ನಗರದ ಖನ್ಯಾರ್ ಪ್ರದೇಶದಲ್ಲಿ ನಡದ ಕಾರ್ಯಾಚರಣೆಯಲ್ಲಿ ಎಲ್ಇಟಿಯ ಕಮಾಂಡರ್‌ನನ್ನು ಹತ್ಯೆಗೈಯ್ಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ಇಬ್ಬರು ಸ್ಥಳೀಯ ಪೊಲೀಸರು ಮತ್ತು ಇಬ್ಬರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದರು. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

Share This Article