ಕೋಲಾರ: ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರು ಹಾಡಹಗಲೇ ನಗರ ಮಧ್ಯದಲ್ಲಿ ಸಂಚಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಕೆ.ಆರ್.ಸರ್ಕಲ್ ಬಳಿ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮುನೇಶ್ವರ ನಗರದ ಸತೀಶ್ ಹಾಗೂ ತಿಮ್ಮಸಂದ್ರದ ಕಿರಣ್ ಬಂಧಿತ ಅರೋಪಿಗಳು. ವಿಠ್ಠಲ್ ಎಂಬವರೇ ಹಲ್ಲೆಗೆ ಒಳಗಾದ ಪೊಲೀಸ್ ಪೇದೆ. ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಡೆದದ್ದು ಏನು?
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರು ಕೆ.ಆರ್.ಸರ್ಕಲ್ ಬಳಿ ಸಂಚಾರ ಪೊಲೀಸ್ ವಿಠ್ಠಲ್ ಕಾರ್ಯನಿರ್ವಹಿಸುತ್ತಿದ್ದರು. ಅವರ ಬಳಿಗೆ ಬಂದ ಆರೋಪಿಗಳು ವಿಳಾಸ ಕೇಳುವ ವಿಚಾರದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ. ಗಾಂಜಾ ಮತ್ತಿನಲ್ಲಿದ್ದ ಅವರು ಅವಾಚ್ಯ ಶಬ್ದಗಳಿಂದ ವಿಠ್ಠಲ್ ಅವರನ್ನು ನಿಂದಿಸಿ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿಯೇ ಅವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‍ಪಿ ರೋಹಿಣಿ ಕಟೋಜ್ ಸಪೆಟ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv