ಬೆಂಗಳೂರು: ರಸ್ತೆ (Road) ಗುಂಡಿ ತಪ್ಪಿಸಲು ಹೋಗಿ ಅಮ್ಮ, ಮಗಳು ಕೆಎಸ್‍ಆರ್‌ಟಿಸಿ ಬಸ್ (KSRTC Bus) ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಬೆಂಗಳೂರಿನ ಸುಜಾತ ಚಿತ್ರಮಂದಿರದ ಬಳಿ ಈ ಭೀಕರ ಘಟನೆ ನಡೆದಿದೆ. ವನಿತಾ ಹಾಗೂ ಉಮಾದೇವಿಯವರಿದ್ದ ದ್ವಿಚಕ್ರ ವಾಹನ ಕೆಎಸ್‍ಆರ್‌ಟಿಸಿ ಬಸ್‍ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಉಮಾದೇವಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ ವನಿತಾ ಎಂಬಾಕೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
Advertisement
ಘಟನೆಗೆ ಸಂಬಂಧಿಸಿ ಪಬ್ಲಿಕ್ ಟಿವಿ ಜೊತೆಗೆ ಕೆಎಸ್‍ಆರ್‌ಟಿಸಿ ಬಸ್ ಚಾಲಕ ಮಾರುತಿ ರಾವ್ ಮಾತನಾಡಿ, ಬಸ್ ಹಾಗೂ ದ್ವಿಚಕ್ರ ವಾಹನ ನಿಧಾನವಾಗಿ ಚಲಿಸುತ್ತಿದ್ದವು. ಏಕೆಂದರೆ ಸಂಚಾರ ದಟ್ಟಣೆ ಇದ್ದ ಕಾರಣ ಎಲ್ಲಾ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದವು. ಆದರೆ ಮಹಿಳೆ ಏಕಾಏಕಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಮುಂದೆ ಬಿದ್ದ ಪರಿಣಾಮ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಿಂದೆ ಇದ್ದ ಮಹಿಳೆಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮಗಳಿಗೆ ನುಗ್ಗಿತು ನೀರು – ಕೆರೆ ಕಟ್ಟೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ
Advertisement
Advertisement
ಡಿಸಿಪಿ ಕುಲದೀಪ್ ಜೈನ್ ಮಾತನಾಡಿ, ಬೆಳಗ್ಗೆ ಕೆಎಸ್‍ಆರ್‌ಟಿಸಿ ಬಸ್ ಅಪಘಾತದಿಂದ ತಾಯಿ, ಮಗಳು ಗಾಯಗೊಂಡಿದ್ದಾರೆ. ವಾಹನ ಚಲಾಯಿಸುತ್ತಿದ್ದ ಮಗಳು ವನಿತಾ ಹಾಗೂ ತಾಯಿ ಉಮಾಗೆ ಅಪಘಾತವಾಗಿದೆ. ಹಿಂಬದಿ ಕುಳಿತಿದ್ದ ಉಮಾ ಪರಿಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಕೆಎಸ್‍ಆರ್‌ಟಿಸಿ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಿಜೆಪಿ ಹವಾ ಕುಗ್ಗಿಸಲು ಕಾಂಗ್ರೆಸ್ ಯಾತ್ರೆ ಅಸ್ತ್ರ – ಮುಂದಿನ ಟಾರ್ಗೆಟ್ ಕರಾವಳಿ, ಮುಂಬೈ ಕರ್ನಾಟಕ