ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.
Advertisement
Advertisement
ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.
Advertisement
ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.
Advertisement
#WATCH Two women devotees Bindu and Kanakdurga entered & offered prayers at Kerala's #SabarimalaTemple at 3.45am today pic.twitter.com/hXDWcUTVXA
— ANI (@ANI) January 2, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv