ಮೈಸೂರು: ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ನಾ ಮುಂದು ತಾ ಮುಂದು ಅಂತಾ ಬಸ್ ಗಳಲ್ಲಿ ನುಗ್ಗುತ್ತಿದ್ದಾರೆ. ಬಸ್ ನ ಕಿಟಿಕಿಗಳು,ಬಾಗಿಲುಗಳು ಸಹ ಪೀಸ್ ಪೀಸ್ ಆಗ್ತಿವೆ. ದೇವಸ್ಥಾನಗಳಂತೂ ಪುಲ್ ರೇಶ್ ಆಗುತ್ತಿದ್ದು, ಅವಾಂತರಗಳು ಮುಂದುವರಿದಿವೆ.
Advertisement
ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್‌ನಲ್ಲಿ ಮಹಿಳೆಯರ ಗಲಾಟೆ ಮಾಡಿ ಕೊಂಡಿರುವ ದೃಶ್ಯ ಕಂಡುಬಂದಿದೆ. ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್‌ನೊಳಗೆ ಕಿತ್ತಾಡಿಕೊಂಡ ವೀಡಿಯೋ ಸದ್ಯ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ- ಬೆಳ್ಳಂಬೆಳಗ್ಗೆ ಕೊಡೆ ಹಿಡಿದ ಜನ
Advertisement
Advertisement
ಒಂದೆರಡು ದಿನಗಳಲ್ಲೇ ಮಾರ್ಗಸೂಚಿ:
ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ಕಂಟ್ರೋಲ್ ಮಾಡೋಕೆ ಸಾರಿಗೆ ಇಲಾಖೆ ಮುಂದಾಗ್ತಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದ್ದಾರೆ. ಕಿಟಕಿ ಹೊಡೆಯೋದು, ಡೋರ್ ಒಡೆಯೋದು ಆದ್ರೇ ಕಷ್ಟ. ಶಿಸ್ತಿನಲ್ಲಿ ಬರಬೇಕು. ಸಪರೇಟ್ ಗೈಡ್ ಲೈನ್ಸ್ ತನ್ನಿ ಅಂತಾ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ
Advertisement
ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಸಚಿವ ರಾಮಲಿಂಗ ರೆಡ್ಡಿ, ಉಚಿತ ಪ್ರಯಾಣ ನಿಭಾಯಿಸೋದು ಕಷ್ಟವಾಗೋದ್ರಿಂದ ಈಗ ನಾವು ಹೊಸ ಮಾರ್ಗಸೂಚಿ ಅನಿವಾರ್ಯ. ಬುಕ್ಕಿಂಗ್ ಮೂಲಕವೇ ಪ್ರಯಾಣಕ್ಕೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ನಿರ್ಧಾರ ಮಾರ್ಗಸೂಚಿ ಹೊರಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹೆಂಡತಿ ನನ್ನ ಮಾತು ಕೇಳುತ್ತಿಲ್ಲ, ದಯಮಾಡಿ ಪರಿಹರಿಸಿ- ಶಾಸಕರಿಗೆ ವ್ಯಕ್ತಿ ದೂರು
ಈ ವೀಕೆಂಡ್ ನಿಂದ ಮಹಿಳಾ ಪ್ರಯಾಣಿಕರ ಪ್ರಯಾಣದ ರೂಲ್ಸ್ ಬದಲಾಗುವ ಸಾಧ್ಯತೆಯಿದೆ. ಸಿಕ್ಕ ಸಿಕ್ಕ ಬಸ್ ಹತ್ತುವಂತಿಲ್ಲ, ಪ್ರಯಾಣ ಮಾಡಬೇಕಾದ್ರೇ ಮುಂಗಡ ಬುಕ್ಕಿಂಗ್ ಕಡ್ಡಾಯವಾಗಿ ಮಾಡಿಕೊಂಡಿರಬೇಕಾಗುತ್ತದೆ. ಒಟ್ಟಿನಲ್ಲಿ ಸಾರಿಗೆ ಇಲಾಖೆ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕಿದೆ.