ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ.
ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಗಾಲದ ಹಿನ್ನೆಲೆ ಮರಗಳು ದುರ್ಬಲಗೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ ಎಂಬ ಮಾತುಗಳು ಕೇಳಿಬರುತ್ತಿವೆ.ಇದನ್ನೂ ಓದಿ: ಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿ

