ಕೋಚಿಂಗ್‍ಗೆ ಬರುವ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

Public TV
1 Min Read
youths arrest

ಧಾರವಾಡ: ಕೋಚಿಂಗ್‌ಗೆ ವಿದ್ಯಾಕಾಶಿಗೆ ಬರುವ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ganja

ನಗರದ ಉದಯ ಹಾಸ್ಟೆಲ್ ಬಳಿ ಉಮೇಶ ಮಡಿವಾಳರ ಹಾಗೂ ದ್ರುವ ಮದಾನ ಎಂಬ ಯುವಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಅಪ್ಪು ಸಮಾಧಿ ಭೇಟಿಗೆ ಸೈಕಲ್‍ನಲ್ಲಿ ಹೊರಟ ಅಭಿಮಾನಿ

ಯುವಕರು 322 ಗ್ರಾಂ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು, ಇಬ್ಬರನ್ನು ಬಂಧಿಸಿದ್ದಾರೆ. ಧಾರವಾಡಕ್ಕೆ ಕೋಚಿಂಗ್‍ಗಾಗಿ ಬರುವ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಇವರು ಗಾಂಜಾ ಮಾರಾಟ ಮಾಡುತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಇದನ್ನೂ ಓದಿ: ಪ್ರಮಾಣ ವಚನ ಸ್ವೀಕರಿಸಿದ ರಮೇಶ್ ಭೂಸನೂರು

arrested

ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *