ಆನೇಕಲ್: ತಡರಾತ್ರಿ ಹೆದ್ದಾರಿ ಬಳಿ ಕಾರು ನಿಲ್ಲಿಸಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲ್ಲೂಕಿನ ತಾವರೇಕೆರೆ ಫ್ಲೈಓವರ್ ಮೇಲೆ ನಡೆದಿದೆ.
ದಿನೇಶ್ (25) ಹಾಗೂ ವಿನಯ್ (25) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮತ್ತಿಬ್ಬರು ಯುವಕರಾದ ಜನಾರ್ಧನ್ ಹಾಗೂ ಜಾಸ್ಮಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ- ಶಾಲೆ ಪ್ರಾಂಶುಪಾಲ, ವಾರ್ಡನ್ ಅಮಾನತು
ನಾಲ್ವರು ಸ್ನೇಹಿತರು ತಡರಾತ್ರಿ ವೈಟ್ ಫೀಲ್ಡ್‌ನಿಂದ ಕೋಲಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ತಾವರೇಕೆರೆ ಫ್ಲೈಓವರ್ ಮೇಲೆ ಬರುತ್ತಿದ್ದಂತೆ ಅಲ್ಲಿ ಕಾರು ನಿಲ್ಲಿಸಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆಗ ವೇಗವಾಗಿ ಬರುತ್ತಿದ್ದ ಹಾಲಿನ ಟ್ಯಾಂಕರ್ ಇವರಿಗೆ ಡಿಕ್ಕಿ ಹೊಡೆದಿದೆ. ಕಾರು ಹಾಗೂ ಟ್ಯಾಂಕರ್ ನಡುವೆ ಸಿಲುಕಿದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
ರಾಷ್ಟ್ರೀಯ ಹೆದ್ದಾರಿ-75 ಬೆಂಗಳೂರು-ಆಂಧ್ರಪ್ರದೇಶ ಸಂಪರ್ಕಿಸುವ ರಸ್ತೆಯಾಗಿದ್ದು, ವೀಕೆಂಡ್ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಜಾಲಿ ರೈಡ್ ವೀಲ್ಹಿಂಗ್ ಮಾಡುವವರು, ರಾತ್ರಿ ವೇಳೆ ಲಾಂಗ್ ಡ್ರೈವ್ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಅಪಘಾತಗಳು ಸಂಭವಿಸಿ ಹಲವರು ಸಾವಿಗೀಡಾಗಿದ್ದಾರೆ.