ಬೆಳಗಾವಿ: ಜೀವದ ಹಂಗು ತೊರೆದು ಚಲಿಸುತ್ತಿರುವ ರೈಲಿನ ವಿರುದ್ಧ ಓಡಿ ಹೋಗಿ ರೈಲು ನಿಲ್ಲಿಸುವ ಮೂಲಕ ದೊಡ್ಡ ದುರಂತವನ್ನೇ ಯುವಕರಿಬ್ಬರು ತಪ್ಪಿಸಿದ್ದು, ಸಾವಿರಾರು ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ.
ರಿಯಾಜ್ ಹಾಗೂ ತೋಫಿಕ್ ಸಾಹಸಿ ಯುವಕರು. ಶುಕ್ರವಾರ ಸಂಜೆ ಬೆಳಗಾವಿಯ ಖಾನಾಪೂರದ ಗಾಂಧಿ ನಗರದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಹಾಪುರ – ಹೈದರಾಬಾದ್ ರೈಲು ಹುಬ್ಬಳ್ಳಿ ಕಡೆ ಚಲಿಸುತ್ತಿತ್ತು. ಆದರೆ ರೈಲಿನ ಟ್ರ್ಯಾಕ್ ಮೇಲೆ ಏಕಾಎಕಿ ಮರ ಬಿದ್ದಿದೆ. ಇದೇ ಮಾರ್ಗವಾಗಿ ಬೈಕ್ ಮೇಲೆ ರಿಯಾಜ್ ಹಾಗೂ ತೋಫಿಕ್ ತೋಟದ ಕಡೆಗೆ ಹೋಗುತ್ತಿದ್ದರು. ಆಗ ಟ್ರ್ಯಾಕ್ ಮೇಲೆ ಮರ ಬಿದ್ದಿದ್ದನ್ನು ಗಮನಿಸಿದ್ದಾರೆ. ಇದನ್ನು ಓದಿ: ಬಸ್‍ನಲ್ಲಿ ಕಾಣಿಸ್ತು ಬೆಂಕಿ ಕಿಡಿ – 1 ಕಿಮೀ ಹಿಂಬಾಲಿಸಿ ಬಂದು 70 ಪ್ರಯಾಣಿಕರ ಜೀವ ಉಳಿಸಿದ ಬೈಕ್ ಸವಾರ
Advertisement
Advertisement
ಅತ್ತ ದೂರದಲ್ಲಿ ರೈಲು ಬರುವುದನ್ನು ಗಮನಿಸಿದ್ದಾರೆ. ತಕ್ಷಣ ಇಬ್ಬರು ತಮ್ಮ ಶರ್ಟ್ ಬಿಚ್ಚಿ ರೈಲಿನ ಮುಂದೆ ಓಡಿ ಅಪಾಯವಿದೆ ಎಂದು ಸೂಚಿಸಿದ್ದಾರೆ. ಇದನ್ನು ನೋಡಿದ ರೈಲು ಸಿಬ್ಬಂದಿ ತಕ್ಷಣ ಬ್ರೇಕ್ ಹಾಕಿದ್ದಾರೆ. ರೈಲು ಸರಿಯಾಗಿ ಮರದ ಹತ್ತಿರವೇ ಬಂದು ನಿಂತಿದೆ. ಒಂದು ವೇಳೆ ಯುವರಿಬ್ಬರು ಈ ಸಾಹಸ ಮಾಡಿಲ್ಲ ಎಂದಿದ್ದರೆ, ರೈಲಿನಲ್ಲಿದ್ದ ಅಷ್ಟು ಪ್ರಯಾಣಿಕರಿಗೂ ಅಪಾಯವಾಗುವ ಸಾಧ್ಯತೆ ಇತ್ತು.
Advertisement
Advertisement
ಈ ರೈಲಿನಲ್ಲಿ 1,200 ಜನರು ಪ್ರಯಾಣ ಮಾಡುತ್ತಿದ್ದರು. ಆದರೆ ಯುವಕರಿಬ್ಬರು ಸಮಯ ಪ್ರಜ್ಞೆಯಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ರಿಯಾಜ್ ಹಾಗೂ ತೋಫಿಕ್ ಸಾಹಸದ ಬಗ್ಗೆ ನೈಋತ್ಯ ರೈಲ್ವೆ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇವರಿಬ್ಬರಿಗೆ ಶೌರ್ಯ ಪ್ರಶಸ್ತಿ ಕೊಡಬೇಕೆಂದು ಸೂಚಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv