ಆನೇಕಲ್: ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ನಡೆದಿದೆ.
ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿದ್ದರು. ಆದರೆ, ಈಜು ಬರದೆ ಇಬ್ಬರು ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಶಾಹಪುರ ಮೂಲದ ಆನಂದ್ ಮತ್ತು ಅಂಬರೀಶ್ ಮೃತರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ | ತಿಂಗಳೊಳಗೆ ತನಿಖೆ ಪೂರ್ಣ: ರಾಮ್ ಮೋಹನ್ ನಾಯ್ಡು
ಸ್ಥಳಕ್ಕೆ ಆನೇಕಲ್ ಮತ್ತು ಎಲೆಕ್ಟ್ರಾನ್ ಸಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಮಧ್ಯಾಹ್ನದಿಂದ ಕಾರ್ಯಚರಣೆ ನಡೆಸಿದ್ದು, ಮೃತದೇಹಗಳು ಪತ್ತೆಯಾಗಲಿಲ್ಲ. ಸಂಜೆಯಾಗುತ್ತಿದ್ದಂತೆ ಕತ್ತಲೆ ಆವರಿಸಿಕೊಂಡಿದ್ದು, ಅರ್ಧಕ್ಕೆ ಕಾರ್ಯಾಚರಣೆ ನಿಲ್ಲಿಸಿದ್ದಾರೆ.
ಮತ್ತೆ ನಾಳೆ ಬೆಳಗ್ಗೆ ಮೃತದೇಹಗಳಿಗೆ ಹುಡುಕಾಟ ನಡೆಸಲಿದೆ. ಸ್ಥಳಕ್ಕೆ ಬಂದ ಬನ್ನೇರುಘಟ್ಟ ಪೋಲಿಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

