ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ (Canal) ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ.
ಊರ ಜಾತ್ರೆ ನಿಮಿತ್ತ ಮನೆಯಲ್ಲಿನ ಬಟ್ಟೆ ಹಾಸಿಗೆ ತೊಳೆಯಲು ಪಾಲಕರೊಂದಿಗೆ ಕಾಲುವೆಗೆ ಹೋದಾಗ ಘಟನೆ ನಡೆದಿದೆ. ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ (25) ಮೃತ ಯುವಕರು. ಬಟ್ಟೆ ತೊಳೆಯೋ ಮೊದಲು ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದ. ಅವನನ್ನು ಕಾಪಾಡಲು ಮತ್ತೋರ್ವ ಯುವಕ ನೀರಿಗೆ ಧುಮುಕಿದ್ದ. ಆದರೆ ಇಬ್ಬರಿಗೂ ಈಜು ಬಾರದ ಹಿನ್ನೆಲೆ ಕಾಲುವೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಸ್ಥಳೀಯರು ರಕ್ಷಣೆಗೆ ಪ್ರಯತ್ನ ಪಟ್ಟರೂ ಯಶಸ್ವಿಯಾಗಿಲ್ಲ. ಬಳಿಕ ಯುವಕರ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ನನಗೂ ಐದು ಜನ ಮಕ್ಕಳು: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ