ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವಿಗೀಡಾಗಿರುವ ಘಟನೆ ಬುಧವಾರ ಮಾಗಡಿ ರಸ್ತೆಯ ರೈಲ್ವೆ ಗೇಟ್ ಬಳಿ ನಡೆದಿದೆ.
ಮೃತ ಯುವಕರು ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಯುವಕರು ಬಿನ್ನಿಪೇಟೆ, ಕೆ.ಪಿ ಅಗ್ರಹಾರದವರು ಎಂದು ಹೇಳಲಾಗುತ್ತಿದೆ. ರಾತ್ರಿ 10:30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
Advertisement
ಬಿನ್ನಿಪೇಟೆಯ ಸೂರ್ಯ ಮತ್ತು ಶರತ್ ಎಂಬಾತ ಕೆಪಿ ಅಗ್ರಹಾರದವ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಇಬ್ಬರು ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ಕೂತಿರುವಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರ ಕಾಲುಗಳು ಮುರಿದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.