ಬೆಂಗಳೂರು: ರಂಗಭೂಮಿ ಚಿತ್ರರಂಗಕ್ಕೆ ಮೂಲಪ್ರೇರಣೆ. ಡಾ. ರಾಜ್‍ಕುಮಾರ್, ನರಸಿಂಹರಾಜು ಅವರಂಥ ದಿಗ್ಗಜರೆಲ್ಲ ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದವರು. ಇದೀಗ ಅದೇ ರಂಗಭೂಮಿ, ತಬಲಾ ವಿದ್ವಾಂಸರು, ಸಂಗೀತಗಾರರ ಫ್ಯಾಮಿಲಿಯಿಂದ ಬಂದ ಎಲ್.ಮಂಜುನಾಥ್ ‘ತ್ರಿಪುರ’ ಎಂಬ ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಲವ್ ಸ್ಟೋರಿಯನ್ನು ನಿರ್ಮಿಸಿ ತೆರೆಯ ಮೇಲೆ ತರುತ್ತಿದ್ದಾರೆ. ಒಂದು ಹೆಣ್ಣಿನ ಹಿಂದೆ ಬಿದ್ದಾಗ ಏನೆಲ್ಲಾ ಆಗುತ್ತದೆ ಎಂದು ಕುತೂಹಲಕರ ಕಥೆಯೊಂದಿಗೆ ಈ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ.
Advertisement
ವಿಶೇಷವಾಗಿ ಈ ಚಿತ್ರದಲ್ಲಿ ಐದು ನಿಮಿಷಗಳ ಹಿಸ್ಟಾರಿಕಲ್ ಕಥೆ ಕೂಡ ಇದೆ. ಈಗಿನ ಕಾಲದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಇಷ್ಟವಾಗುವಂತ ಕಥೆ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲಾ ಮುಗಿದಿದ್ದು ಕಳೆದ ವಾರ ಸೆನ್ಸಾರ್ ಮಂಡಳಿ ವೀಕ್ಷಿಸಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಚಿತ್ರವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
Advertisement
Advertisement
ಶ್ರೀ ಅಂಕುರ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಈ ಹಿಂದೆ ಮುಕ್ತಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕೆ.ಶಂಕರ್ ಚಿತ್ರಕಥೆ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಗೌರಿ ವೆಂಕಟೇಶ್ ಛಾಯಾಗ್ರಹಣ, ಡಿ.ಆರ್.ಹೇಮಂತಕುಮಾರ್ ಸಂಗೀತ, ಕೆ.ಶಂಕರ್ ಸಂಭಾಷಣೆ ಮತ್ತು ಸಾಹಿತ್ಯ, ಹರಿಕೃಷ್ಣ ನೃತ್ಯ ನಿರ್ದೇಶನ, ರಾಜಶೇಖರರೆಡ್ಡಿ ಸಂಕಲನವಿದೆ. ಅಶ್ವಿನಿಗೌಡ, ಶ್ರೀಧರ್, ಧರ್ಮ, ಟೆನ್ನಿಸ್ ಕೃಷ್ಣ, ಲಕ್ಷ್ಮಣ್ ರಾವ್, ಕಿಲ್ಲರ್ ವೆಂಕಟೇಶ್, ರಮಾನಂದ್, ಸುಂದರಶ್ರೀ, ಡಿಂಗ್ರಿ ನಾಗರಾಜ್, ಬೇಬಿ ಆದ್ಯ, ಪವಿತ್ರ, ಮಂಜುನಾಥ್ ಮುಂತಾದವರ ತಾರಾಬಳಗವಿದೆ.
Advertisement