ಮಂಗಳೂರು: ಗೂಂಡಾಗಳ ಕೈಯಲ್ಲಿ ರಾಜ್ಯವನ್ನು ಕೊಟ್ಟಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಗೂಂಡಾಗಳು ಆಳುತ್ತಿದ್ದಾರೆ. ಗೂಂಡಾಗಳ ಕೈಯಲ್ಲಿ ರಾಜ್ಯವನ್ನು ಕೊಟ್ಟಿದ್ದಾರೆ ಎಂದು ಬಿಜೆಪಿ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದರು.
Advertisement
Advertisement
ಕರ್ನಾಟಕ ರಾಜ್ಯಕ್ಕೆ ಅದರದ್ದೇ ಆದ ಇತಿಹಾಸ ಸಂಸ್ಕೃತಿ ಇದೆ. ಬಿಜೆಪಿಯಿಂದ ರಾಜ್ಯದ ಘನತೆಗೆ ಕಪ್ಪು ಚುಕ್ಕೆಯಾಗಿದೆ. 95% ಜನರು ಈ ಬೆಳವಣಿಗೆಯ ಬಗ್ಗೆ ಸರ್ಕಾರವನ್ನು ತಿರಸ್ಕಾರ ಮಾಡುತ್ತಾರೆ. ರಾಜ್ಯ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ದಿವಾಳಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ. ಮುಖ್ಯಮಂತ್ರಿ ಈ ಬಗ್ಗೆ ಮಾತನಾಡಲೇ ಬೇಕು. ಇಲ್ಲವಾದಲ್ಲಿ ಕನ್ನಡಿಗರು ಸರ್ಕಾರವನ್ನು ಕ್ಷಮಿಸೋದೇ ಇಲ್ಲ. ಕೋಮುವಾದಿಗಳ ವಿವಾದವನ್ನು ಸರ್ಕಾರ ಮಟ್ಟಹಾಕಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ
Advertisement
Advertisement
ಧಾರವಾಡದಲ್ಲಿ ನಾಲ್ಕು ಜನ ಯುವಕರ ಕೃತ್ಯವನ್ನು ಸಮಾಜ ಖಂಡಿಸಿದೆ. ಇಂತಹ ಕೆಲಸಗಳನ್ನು ಕ್ರೂರಿ ಮನಸ್ಸಿನ ಜನರು ಮಾಡುತ್ತಾರೆ. ಈ ಬೆಳವಣಿಗೆಗೆ ಕಡಿವಾಣ ಹಾಕುವ ಜವಾಬ್ದಾರಿ ಯಾರದ್ದು ಎಂದು ಪ್ರಶ್ನಿಸಿದ ಅವರು, ಕೋಮುವಾದಿ ಶಕ್ತಿಗಳು ರಾಜ್ಯದಲ್ಲಿ ಸಮಸ್ಯೆ ಸೃಷ್ಟಿಸಲು ಪ್ರಯತ್ನ ಮಾಡುತ್ತಿದೆ. ಕೋಮುವಾದಿಗಳ ಅಜೆಂಡಾವನ್ನು ಸಫಲವಾಗೋಕೆ ಸರ್ಕಾರ ಬಿಡಬಾರದು ಎಂದು ಸಿಡಿಮಿಡಿಗೊಂಡರು. ಇದನ್ನೂ ಓದಿ: ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು